Archive for June 12, 2010

ಅವರಿಬ್ಬರಿದ್ದರು- ಪುಟಾಣಿ ಅಣ್ಣ, ಪುಟ್ಟ ತಂಗಿ. ಇಬ್ಬರಂದರೆ, ಇಬ್ಬರೇ. ಪೂರಾ ಅನಾಥರು. ಹಾ! ಅವರ ಹತ್ತಿರ  ಕೆಂಪು ಜುಟ್ಟಿನಹುಂಜವೊಂದಿತ್ತು. ಅದೆಂದರೆ ಇಬ್ಬರಿಗೂ ಬಹಳ ಪ್ರೀತಿ. ಒಂದು ದಿನ ತಂಗಿಗೆ ವಿಪರೀತ ಹಸಿವಾಯ್ತು. ಮನೇಲಿ ತಿನ್ನಲಿಕ್ಕೆ ಏನೂ ಇಲ್ಲ! ಸರಿ. ಅಣ್ಣ ಮನೆಯ ಮೂಲೆಮೂಲೆ ಹುಡುಕಿದ. ಕಣಜದ ಬುಡದಲ್ಲೊಂದಷ್ಟು ಗೋಧಿಕಾಳು ಸಿಕ್ಕವು. ಅದನ್ನೇ ಬೀಸಿ ತಂಗಿಗೆ ಚಪಾತಿ ಮಾಡಿಕೊಡುವಾ ಅಂತ ಅಣ್ಣ ಅವನ್ನು ಒಟ್ಟುಮಾಡಿದ. ಇನ್ನೇನು ಬೀಸಬೇಕು, ಹುಂಜ ಅವನನ್ನ ತಡೆಯಿತು. ಒಂದು ಕಾಳು ಗೋಧಿಯನ್ನ ಬಿತ್ತಲು ಹೇಳಿತು. [...]