ಅವರಿಬ್ಬರಿದ್ದರು- ಪುಟಾಣಿ ಅಣ್ಣ, ಪುಟ್ಟ ತಂಗಿ. ಇಬ್ಬರಂದರೆ, ಇಬ್ಬರೇ. ಪೂರಾ ಅನಾಥರು. ಹಾ! ಅವರ ಹತ್ತಿರ ಕೆಂಪು ಜುಟ್ಟಿನಹುಂಜವೊಂದಿತ್ತು. ಅದೆಂದರೆ ಇಬ್ಬರಿಗೂ ಬಹಳ ಪ್ರೀತಿ. ಒಂದು ದಿನ ತಂಗಿಗೆ ವಿಪರೀತ ಹಸಿವಾಯ್ತು. ಮನೇಲಿ ತಿನ್ನಲಿಕ್ಕೆ ಏನೂ ಇಲ್ಲ! ಸರಿ. ಅಣ್ಣ ಮನೆಯ ಮೂಲೆಮೂಲೆ ಹುಡುಕಿದ. ಕಣಜದ ಬುಡದಲ್ಲೊಂದಷ್ಟು ಗೋಧಿಕಾಳು ಸಿಕ್ಕವು. ಅದನ್ನೇ ಬೀಸಿ ತಂಗಿಗೆ ಚಪಾತಿ ಮಾಡಿಕೊಡುವಾ ಅಂತ ಅಣ್ಣ ಅವನ್ನು ಒಟ್ಟುಮಾಡಿದ. ಇನ್ನೇನು ಬೀಸಬೇಕು, ಹುಂಜ ಅವನನ್ನ ತಡೆಯಿತು. ಒಂದು ಕಾಳು ಗೋಧಿಯನ್ನ ಬಿತ್ತಲು ಹೇಳಿತು. [...]
Archive for the ‘ಅಜ್ಜಿ ಕಥೆ’ Category
ಒಂದೂರಲ್ಲಿ ಒಬ್ಬ ಅಗಸ ಇದ್ದ. ಅವನ ಹೆಸ್ರು ಬಸ್ಯ. ಅವನ ಸಂಗಾತಿ ಸಿಂಗ, ಅವನ ನೆಚ್ಚಿನ ಕತ್ತೆಯೇ ಆಗಿತ್ತು. ಯಾವಾಗ್ಲೂ ಬಸ್ಯನ ಹಿಂದೆ ಸಿಂಗ, ಸಿಂಗನ ಮುಂದೆ ಬಸ್ಯ ಇರ್ಲೇಬೇಕು. ಹಾಂಗಿತ್ತು ಅವರ ದೋಸ್ತಿ. ಒಂದಿನ ಬಸ್ಯ ಮತ್ತು ಸಿಂಗ ಅದೆಲ್ಲಿಗೂ ದೂರದೂರಿಗೆ ಹೊರಟ್ರು. ಹೋಗ್ತಾ ಹೋಗ್ತಾ ಕತ್ಲಾಯ್ತಾ, ಸರಿ. ಒಂದ್ ಮರದ್ ಕೆಳಗೆ ಅಡ್ಡದ್ರು. ಸಿಂಗ ತನ್ ಯಜಮಾನನ್ನ ಒಂದ್ ಕಥೆ ಹೇಳು, ಒಂದ್ ಕಥೆ ಹೇಳು ಅಂತ ಪೀಡಿಸ್ದ. ಆದ್ರೆ ಅಗಸಂಗೆ ಅದಾಗ್ಲೇ ಕಣ್ಣು [...]