ಭೂಮಿಯಲ್ಲಿ ಋಷಿಗಳು ತಪಸ್ಸಿಗೆ ಕುಳಿತರೆ ಸಾಕು, ಇಂದ್ರ ಸಿಂಹಾಸನಕ್ಕೆ ನಡುಕ! ಪ್ರತಿ ಬಾರಿಯೂ ಇಂಥದನ್ನು ತಡೆಯಲು ಆತ ತನ್ನ ಅಪ್ಸರೆಯರನ್ನು ಅವರತ್ತ ಕಳುಹಿಸಿ ತಪೋಭಂಗ ಮಾಡುತ್ತಿದ್ದ. ಈ ಬಗೆಯ ಕಥೆಗಳಲ್ಲಿ ವಿಶ್ವಾಮಿತ್ರನ ತಪೋಭಂಗದ ಕಥೆ ಅತಿ ಜನಪ್ರಿಯ. ಅಂಥದೇ ಇಲ್ಲಿ, ಮತ್ತೊಂದು… ಹೀಗೊಬ್ಬನಿದ್ದ ಕಂಡು ಮಹರ್ಷಿ. ಆತನೂ ಒಮ್ಮೆ ತಪಸ್ಸಿಗೆ ಕುಂತ. ಹೆದರಿದ ಇಂದ್ರ ಪ್ರಮ್ಲೋಚೆ ಎಂಬ ಅಪ್ಸರೆಯನ್ನು ತಪಸ್ಸು ಕೆಡಿಸಲೆಂದೇ ಕಳಿಸಿಕೊಟ್ಟ. ಪ್ರಮ್ಲೋಚೆಯ ರೂಪ ಲಾವಣ್ಯ ಕಂಡು ಮುನಿಯನ್ನು ಸೆಳೆದವು. ಇಂದ್ರನ ತಂತ್ರ ನೆರವೆರಿತು, ಪ್ರಮ್ಲೋಚೆಯಲ್ಲಿ ಮುನಿಯ [...]
Archive for the ‘ಪುರಾಣ’ Category
ಭಾಗವತ ಪುರಾಣದಲ್ಲಿ ಮಹಾರಾಜ ನಭಗ ಮತ್ತವ ಮಗ ನಾಭಾಗನ ಕಥೆಯೊಂದು ಬರುತ್ತೆ. ಅದು ಹೀಗಿದೆ. ಮಹಾರಾಜ ನಭಗ, ನಾಭಾ ಹೆಸರಿನ ಮನುವಿನ ಪುತ್ರ. ಈ ನಭಗನ ಪುತ್ರರಲ್ಲೊಬ್ಬನಾದ ನಾಭಾಗ ದೀರ್ಘ ಕಾಲದವರೆಗೆ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿದ್ದ. ಈ ಕಾಲದಲ್ಲಿ ಅವನ ಹಿರಿಯ ಸಹೋದರರು ನಾಭಾಗನು ಇಷ್ಟು ವರ್ಷವಾದರೂ ಮರಳಿಬಾರದಿದ್ದುದರಿಂದ ಆತನೆಲ್ಲೋ ಸಂನ್ಯಾಸಿಯಾಗುವ ವ್ರತ ಕೈಗೊಂಡಿರಬೇಕೆಂದು ತಿಳಿದು, ರಾಜ್ಯದಲ್ಲಿ ಅವನಿಗೆ ಪಾಲು ಕೊಡಬೇಕೆನ್ನುವುದನ್ನು ಪರಿಗಣಿಸದೆ ತಮ್ಮ ತಮ್ಮಲ್ಲೆ ಹಂಚಿಕೊಂಡುಬಿಟ್ಟರು. ನಾಭಾಗ ಹಿಂದಿರುಗಿದಾಗ ತಮ್ಮ ತಂದೆಯನ್ನೇ ಅವನ ಪಾಲಿನ ಆಸ್ತಿ [...]